1 Kings 2:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನನ್ನು ದಂಡಿಸದೆ ಬಿಡಬೇಡ. ನೀನು ಬುದ್ಧಿವಂತ! ಅವನಿಗೆ ಏನು ಮಾಡಬೇಕೆಂಬುದು ನಿನಗೆ ತಿಳಿದಿದೆ. ಆದರೆ ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು.
Kannada BSI Bible 2016
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.
Kannada Bible (KNCL) BSI 2016
ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.