1 Kings 20:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
Kannada BSI Bible 2016
ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಮಂದಿ ಅರಸರೊಡನೆ ಹೊರಟು ಬಂದು ಸಮಾರ್ಯಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
Kannada Bible (KNCL) BSI 2016
ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.