1 Kings 20:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಆ ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ಆ ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದ್ದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Kannada BSI Bible 2016
ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೆ ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Kannada Bible (KNCL) BSI 2016
ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.