1 Kings 20:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಬನು ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಒಟ್ಟಾಗಿ ಸೇರಿಸಿದನು. ಅಲ್ಲಿ ಇನ್ನೂರ ಮೂವತ್ತೆರಡು ಮಂದಿ ಯುವಜನರಿದ್ದರು. ನಂತರ ರಾಜನು ಇಸ್ರೇಲಿನ ಸೈನ್ಯವನ್ನು ಒಟ್ಟಾಗಿ ಕರೆದನು. ಅವರಲ್ಲಿ ಒಟ್ಟು ಏಳುಸಾವಿರ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
Kannada BSI Bible 2016
ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿಯಿದ್ದರು; ಇಸ್ರಾಯೇಲ್ಯರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.
Kannada Bible (KNCL) BSI 2016
ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿ ಇದ್ದರು; ಇಸ್ರಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.