1 Kings 20:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಹದದನು, “ಅವರು ಪ್ರಾಯಶಃ ಹೋರಾಡಲು ಬಂದಿರಬಹುದು ಅಥವಾ ಅವರು ಶಾಂತಿ ಸಂಧಾನಕ್ಕಾಗಿ ಬಂದಿರಬಹುದು. ಅವರು ಯಾವುದಕ್ಕಾಗಿ ಬಂದಿದ್ದರೂ ಅವರನ್ನು ಜೀವಸಹಿತ ಬಂಧಿಸಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ, “ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.