1 Kings 20:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
Kannada BSI Bible 2016
ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನು ಹೊರಟುಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
Kannada Bible (KNCL) BSI 2016
ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.