1 Kings 20:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಪ್ರವಾದಿಯು ರಾಜನಾದ ಅಹಾಬನಲ್ಲಿಗೆ ಹೋಗಿ, “ಅರಾಮಿನ ರಾಜನಾದ ಬೆನ್ಹದದನು ಮುಂದಿನ ವಸಂತಮಾಸದಲ್ಲಿ ನಿನ್ನ ವಿರುದ್ಧ ಯುದ್ಧಮಾಡಲು ಮತ್ತೆ ಬರುತ್ತಾನೆ. ಈಗ ನೀನು ಮನೆಗೆ ಹೋಗಿ ನಿನ್ನ ಸೈನ್ಯವನ್ನು ಬಲಪಡಿಸು. ಅವನ ವಿರುದ್ಧ ನೀನು ಸಮರ್ಥನಾಗಲು ಎಚ್ಚರಿಕೆಯಿಂದ ಉಪಾಯಗಳನ್ನು ಮಾಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.
Kannada BSI Bible 2016
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.
Kannada Bible (KNCL) BSI 2016
ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.