1 Kings 20:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.
Kannada BSI Bible 2016
ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ - ಇಸ್ರಾಯೇಲ್ಯರ ದೇವರು ಬೆಟ್ಟಗಳ ದೇವರಾಗಿರುವದರಿಂದ ಅವರು ನಮ್ಮನ್ನು ಸೊಲಿಸಿದರು; ನಾವು ಅವರೊಡನೆ ಬೈಲಿನಲ್ಲಿ ಯುದ್ಧಮಾಡುವದಾದರೆ ಹೇಗೂ ಜಯಹೊಂದುವೆವು.
Kannada Bible (KNCL) BSI 2016
ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.