1 Kings 20:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
Kannada BSI Bible 2016
ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೂ ಕೂಡಿ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರೋಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲ್ಯರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
Kannada Bible (KNCL) BSI 2016
ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.