1 Kings 20:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
Kannada BSI Bible 2016
ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಎರಡು ಸೈನ್ಯಗಳೂ ಏಳು ದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲ್ಯರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
Kannada Bible (KNCL) BSI 2016
ಈ ಎರಡು ಸೈನ್ಯಗಳೂ ಏಳುದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು; ಏಳನೆಯ ದಿನದಲ್ಲಿ ಯುದ್ಧಪ್ರಾರಂಭವಾಯಿತು. ಇಸ್ರಯೇಲರು ಆ ಒಂದೇ ದಿನದಲ್ಲಿ ಸಿರಿಯಾದವರ ಒಂದು ಲಕ್ಷಮಂದಿ ಕಾಲಾಳುಗಳನ್ನು ವಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.