1 Kings 20:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಸಂದೇಶವು ಹೀಗಿತ್ತು: “ಬೆನ್ಹದದನು ಹೀಗೆನ್ನುವನು, ‘ನೀವು ನನಗೆ ನಿಮ್ಮಲ್ಲಿರುವ ಬೆಳ್ಳಿಬಂಗಾರಗಳನ್ನು ಒಪ್ಪಿಸಬೇಕು. ನಿಮ್ಮ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ” ಎಂಬುದಾಗಿ ತಿಳಿಸಿದನು.
Kannada BSI Bible 2016
ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರೂ ನನ್ನವರೇ ಎಂದು ತಿಳಿದುಕೋ ಎಂಬದಾಗಿ ಹೇಳಿಸಿದನು.
Kannada Bible (KNCL) BSI 2016
“ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರರೂ ನನ್ನವರೇ ಎಂದು ತಿಳಿದುಕೋ,” ಎಂಬುದಾಗಿ ಆ ದೂತರಿಂದ ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’ ” ಎಂಬುದಾಗಿ ಅವನಿಗೆ ಹೇಳಿದನು.