1 Kings 20:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬದುಕಿ ಉಳಿದವರು ಅಫೇಕ್ ನಗರಕ್ಕೆ ಓಡಿಹೋದರು. ಆ ನಗರದ ಗೋಡೆಯು ಉಳಿದಿದ್ದ ಇಪ್ಪತ್ತೇಳು ಸಾವಿರ ಜನರ ಮೇಲೆ ಉರುಳಿ ಬಿತ್ತು. ಬೆನ್ಹದದನೂ ನಗರಕ್ಕೆ ಓಡಿಹೋಗಿ ಒಂದು ಕೊಠಡಿಯಲ್ಲಿ ಅವಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
Kannada BSI Bible 2016
ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು; ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.
Kannada Bible (KNCL) BSI 2016
ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.