1 Kings 20:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.
Kannada BSI Bible 2016
ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನ ಸೇವಕರು ಅವನಿಗೆ - ಇಸ್ರಾಯೇಲ್ಯರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿಗೆ ಹೋಗುವದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡುವದಾದರೆ ಅವನು ನಿನ್ನ ಜೀವವನ್ನು ಉಳಿಸಾನು ಎಂದು ಹೇಳಿದರು.
Kannada Bible (KNCL) BSI 2016
ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.