1 Kings 20:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡು, ತಲೆಯ ಮೇಲೆ ಹಗ್ಗವನ್ನು ಹಾಕಿಕೊಂಡು, ಇಸ್ರೇಲಿನ ರಾಜನ ಬಳಿಗೆ ಬಂದರು. ಅವರು, “ನಿಮ್ಮ ಸೇವಕನಾದ ಬೆನ್ಹದದನು ಹೀಗೆನ್ನುವನು: ‘ದಯವಿಟ್ಟು ನನ್ನನ್ನು ಜೀವಸಹಿತ ಬಿಡು” ಎಂದರು. ಅಹಾಬನು, ‘ಅವನಿನ್ನೂ ಜೀವಸಹಿತ ಇದ್ದಾನೆಯೇ? ಅವನು ನನ್ನ ಸೋದರ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ” ಅಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು” ಎಂದು ಉತ್ತರಕೊಟ್ಟನು.
Kannada BSI Bible 2016
ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ನನಗೆ ಜೀವದಾನಮಾಡಬೇಕೆಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ ಅಂದರು. ಆಗ ಅವನು - ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.