1 Kings 20:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
Kannada BSI Bible 2016
ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಮಂಡಲಿಯವರಲ್ಲಿ ಒಬ್ಬನು ಯೆಹೋವ ಪ್ರೇರಿತನಾಗಿ ತನ್ನ ಜೊತೆಗಾರನಿಗೆ - ನನ್ನನ್ನು ಹೊಡಿ ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
Kannada Bible (KNCL) BSI 2016
ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.