1 Kings 20:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.
Kannada BSI Bible 2016
ಆಗ ಪ್ರವಾದಿಯು ಹೋಗಿ ತನ್ನ ಮುಖದ ಮೇಲೆ ಬೂದಿ ಯನ್ನು ಹಚ್ಚಿಕೊಂಡು ಮುಖ ಮರೆಮಾಡಿ ಅರಸನಿ ಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತು
Kannada Bible (KNCL) BSI 2016
ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.