1 Kings 20:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಇಸ್ರಾಯೇಲರ ಅರಸನು, “ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ” ಎಂದು ಉತ್ತರಕೊಟ್ಟು ಕಳುಹಿಸಿದನು.
Kannada BSI Bible 2016
ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ಅರಸನಾದ ನನ್ನ ಒಡೆ ಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು; ನನ್ನದೆಲ್ಲವೂ ನಿನ್ನದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಇಸ್ರಾಯೇಲ್ಯರ ಅರಸನು - ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ; ನನಗಿರುವದೆಲ್ಲವೂ ನಿನ್ನದೇ ಎಂದು ಉತ್ತರಕೊಟ್ಟು ಕಳುಹಿಸಿದನು.
Kannada Bible (KNCL) BSI 2016
ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.