1 Kings 20:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಆ ಪ್ರವಾದಿಯು ತನ್ನ ಕಣ್ಣುಗಳ ಮೇಲಿನ ಬಟ್ಟೆಯನ್ನು ಸರಿಸಿದ್ದರಿಂದ ಅವನು ಪ್ರವಾದಿಗಳಲ್ಲಿ ಒಬ್ಬನೆಂಬುದು ಇಸ್ರೇಲಿನ ರಾಜನಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.
Kannada BSI Bible 2016
ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೇ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲ್ಯರ ಅರಸನಿಗೆ ಗೊತ್ತಾಯಿತು.
Kannada Bible (KNCL) BSI 2016
ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.