1 Kings 20:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪ್ರವಾದಿಯು ರಾಜನಿಗೆ, “ಯೆಹೋವನು ನಿನಗೆ ಹೀಗೆನ್ನುತ್ತಾನೆ, ‘ನಾನು ಸಂಹರಿಸೆಂದು ಹೇಳಿದ ಮನುಷ್ಯನನ್ನು ನೀನು ಸ್ವತಂತ್ರನಾಗಿಸಿದೆ. ಆದ್ದರಿಂದ ಅವನಿಗೆ ಸಂಭವಿಸಬೇಕಾದದ್ದು ನಿನಗೆ ಸಂಭವಿಸುವುದು. ನೀನು ಸಾಯುವೆ! ಶತ್ರುಗಳಿಗೆ ಸಂಭವಿಸಬೇಕಾದದ್ದು ನಿನ್ನ ಜನರಿಗೆ ಸಂಭವಿಸುವುದು. ನಿನ್ನ ಜನರು ಸಾಯುತ್ತಾರೆ!”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
Kannada BSI Bible 2016
ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.