1 Kings 20:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಆ ಸಂದೇಶಕರು ಅಹಾಬನ ಹತ್ತಿರಕ್ಕೆ ಹಿಂದಿರುಗಿ ಬಂದು, “ಬೆನ್ಹದದನು ಹೀಗೆನ್ನುತ್ತಾನೆ, ‘ನೀನು ನಿನ್ನಲ್ಲಿರುವ ಎಲ್ಲಾ ಬೆಳ್ಳಿಬಂಗಾರವನ್ನು ಮತ್ತು ನಿನ್ನ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕೆಂದು ನಾನು ಮುಂಚೆಯೇ ನಿನಗೆ ತಿಳಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.
Kannada BSI Bible 2016
ಆ ದೂತರು ತಿರಿಗಿ ಬಂದು ಅವನಿಗೆ--ಒಡೆಯನೇ, ಬೆನ್ಹದದನು ಹೇಳುವ ದೇನಂದರೆ--ನಿನ್ನ ಬೆಳ್ಳಿಯನ್ನೂ ಬಂಗಾರವನ್ನೂ ನಿನ್ನ ಸ್ತ್ರೀಯರನ್ನೂ ಮಕ್ಕಳನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೂತರು ತಿರಿಗಿ ಅಹಾಬನ ಬಳಿಗೆ ಬಂದು ಅವನಿಗೆ - ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲಾ.
Kannada Bible (KNCL) BSI 2016
ಆ ದೂತರು ಮರಳಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?