1 Kings 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಬೋತನ ಬಗ್ಗೆ ಸುಳ್ಳುಹೇಳುವ ಕೆಲವು ಜನರನ್ನು ಪತ್ತೆಹಚ್ಚಿ, ನಾಬೋತನು ರಾಜನ ವಿರುದ್ಧವಾಗಿ ಮತ್ತು ದೇವರ ವಿರುದ್ಧವಾಗಿ ಮಾತನಾಡುವುದನ್ನು ನಾವು ಕೇಳಿಸಿಕೊಂಡೆವೆಂದು ಅವರು ಹೇಳಲೇಬೇಕು. ಆಗ ನಾಬೋತನನ್ನು ನಗರದಿಂದ ಹೊರಕ್ಕೆ ಕರೆದೊಯ್ದು ಅವನನ್ನು ಕಲ್ಲೆಸೆದು ಕೊಂದುಹಾಕಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
Kannada BSI Bible 2016
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.
Kannada Bible (KNCL) BSI 2016
ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.