1 Kings 21:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.
Kannada BSI Bible 2016
ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.
Kannada Bible (KNCL) BSI 2016
ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.