1 Kings 21:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿದ ಈಜೆಬೆಲಳು ಅಹಾಬನಿಗೆ, “ನಾಬೋತನು ಸತ್ತುಹೋದನು. ಈಗ ನೀನು ಹೋಗಿ, ನಿನಗೆ ಇಷ್ಟವಾದ ಆ ದ್ರಾಕ್ಷಿತೋಟವನ್ನು ತೆಗೆದುಕೊ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಇದನ್ನು ಕೇಳಿ ಅಹಾಬನಿಗೆ, “ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು” ಎಂದು ಹೇಳಿದಳು.
Kannada BSI Bible 2016
ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಇದನ್ನು ಕೇಳಿ ಅಹಾಬನಿಗೆ - ನೀನು ಹೋಗಿ ನಾಬೋತನು ಮಾರುವದಿಲ್ಲವೆಂದು ಹೇಳಿದ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೋ; ಅವನು ಜೀವದಿಂದಿಲ್ಲ, ಸತ್ತನು ಎಂದು ಹೇಳಿದಳು.
Kannada Bible (KNCL) BSI 2016
ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು.