1 Kings 21:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಮಾರ್ಯದಲ್ಲಿ ಆಳುತ್ತಿರುವ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ಹೋಗು. ಅಹಾಬನು ಈಗ ನಾಬೋತನ ದ್ರಾಕ್ಷಿತೋಟದಲ್ಲಿದ್ದಾನೆ. ಆ ತೋಟವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅವನು ಅಲ್ಲಿಗೆ ಹೋಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
Kannada BSI Bible 2016
ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ - ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
Kannada Bible (KNCL) BSI 2016
“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.