1 Kings 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.
Kannada BSI Bible 2016
ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.
Kannada Bible (KNCL) BSI 2016
ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.