1 Kings 21:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಬನು ಬಹುಕೆಟ್ಟ ಪಾಪವನ್ನು ಮಾಡಿದನು ಮತ್ತು ವಿಗ್ರಹಗಳನ್ನು ಆರಾಧಿಸಿದನು. ಅಮೋರ್ಯರು ಇಂತಹ ಕಾರ್ಯವನ್ನೇ ಮಾಡಿದ್ದರು. ಯೆಹೋವನು ಅವರನ್ನು ಅವರ ನಾಡಿನಿಂದ ಓಡಿಸಿದನು ಮತ್ತು ಅದನ್ನು ಇಸ್ರೇಲಿನ ಜನರಿಗೆ ದಯಪಾಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.
Kannada BSI Bible 2016
ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.
Kannada Bible (KNCL) BSI 2016
ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.