1 Kings 21:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
Kannada BSI Bible 2016
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ಹರಿದುಕೊಂಡು ಹಗಲಿರುಳು ಮೈಮೇಲೆ ಗೋಣೀತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
Kannada Bible (KNCL) BSI 2016
ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.