1 Kings 21:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅಹಾಬನು ನನ್ನ ಎದುರಿನಲ್ಲಿ ತನ್ನನ್ನು ತಗ್ಗಿಸಿಕೊಂಡಿರುವುದನ್ನು ನಾನು ನೋಡುತ್ತಿದ್ದೇನೆ. ಆದ್ದರಿಂದ ಅವನ ಜೀವಮಾನಕಾಲದಲ್ಲಿ ಅವನಿಗೆ ಕೇಡಾಗದಂತೆ ಮಾಡುವೆನು. ಅವನ ಮಗ ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ಅಹಾಬನ ಕುಟುಂಬಕ್ಕೆ ಕೇಡನ್ನು ಬರಮಾಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.
Kannada BSI Bible 2016
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.
Kannada Bible (KNCL) BSI 2016
“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.