1 Kings 21:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಬೋತನು, “ನಾನು ನನ್ನ ಭೂಮಿಯನ್ನು ಎಂದಿಗೂ ನಿನಗೆ ಕೊಡುವುದಿಲ್ಲ. ಅದು ನನ್ನ ವಂಶಕ್ಕೆ ಸೇರಿದ್ದು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನಾಬೋತನು ಅಹಾಬನಿಗೆ, “ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.