1 Kings 21:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. (“ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು.) ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
Kannada BSI Bible 2016
ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪಿತ್ರಾರ್ಜಿತಸ್ವಾಸ್ತ್ಯವನ್ನು ನಿನಗೆ ಕೊಡುವದಿಲ್ಲವೆಂದು ನಾಬೋತನು ಹೇಳಿದದರಿಂದ ಅಹಾಬನು ಸಿಟ್ಟಿನಿಂದ ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
Kannada Bible (KNCL) BSI 2016
ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.