1 Kings 21:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಈಜೆಬೆಲಳು ಕೆಲವು ಪತ್ರಗಳನ್ನು ಬರೆದಳು. ಅವಳು ಆ ಪತ್ರಗಳಿಗೆ ಅಹಾಬನ ಹೆಸರಿನ ಸಹಿಯನ್ನು ಮಾಡಿದಳು. ಅಹಾಬನ ಸ್ವಂತ ಮೊಹರನ್ನು ಅವಳು ಆ ಪತ್ರಗಳಿಗೆ ಹಾಕಿದಳು. ನಾಬೋತನು ಇದ್ದ ಆ ಪಟ್ಟಣದಲ್ಲಿ ವಾಸವಾಗಿದ್ದ ಮುಖ್ಯಜನರಿಗೂ ಹಿರಿಯರಿಗೂ ಅವಳು ಆ ಪತ್ರಗಳನ್ನು ಕಳುಹಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
Kannada BSI Bible 2016
ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು ಅದಕ್ಕೆ ಅವನ ಮುದ್ರೆಹಾಕಿ ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
Kannada Bible (KNCL) BSI 2016
ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.