1 Kings 22:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿಗಳಲ್ಲಿ ಚಿದ್ಕೀಯ ಎಂಬ ಹೆಸರಿನವನೊಬ್ಬನಿದ್ದನು. ಅವನು ಕೆನಾನನ ಮಗ. ಚಿದ್ಕೀಯನು ಕೆಲವು ಕಬ್ಬಿಣದ ಕೊಂಬುಗಳನ್ನು ಮಾಡಿಸಿದ್ದನು. ಆಗ ಅವನು ಅಹಾಬನಿಗೆ, “ಯೆಹೋವನು ಹೀಗೆನ್ನುವನು: ‘ಅರಾಮ್ಯರ ಸೈನ್ಯದ ವಿರುದ್ಧ ಹೋರಾಡಲು ನೀನು ಈ ಕೊಂಬುಗಳನ್ನು ಬಳಸುವೆ. ನೀನು ಅವರನ್ನು ಸೋಲಿಸುವೆ ಮತ್ತು ನಾಶಗೊಳಿಸುವೆ”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
Kannada BSI Bible 2016
ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.
Kannada Bible (KNCL) BSI 2016
ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.