1 Kings 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಾರ್ಯಗಳು ನಡೆಯುತ್ತಿರುವಾಗ, ಮೀಕಾಯೆಹುವನ್ನು ಕಂಡುಹಿಡಿಯಲು ಅಧಿಕಾರಿಯೊಬ್ಬನು ಹೋದನು. ಅಧಿಕಾರಿಯು ಮೀಕಾಯೆಹುವನ್ನು ಕಂಡುಹಿಡಿದು, ಅವನಿಗೆ, “ರಾಜನಿಗೆ ಶುಭವಾಗುವುದೆಂದು ಪ್ರವಾದಿಗಳೆಲ್ಲರೂ ಹೇಳಿದ್ದಾರೆ. ಆದ್ದರಿಂದ ಅವರು ಹೇಳಿದಂತೆಯೇ ನೀನೂ ಹೇಳುವುದು ನಿನಗೇ ಒಳ್ಳೆಯದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
Kannada BSI Bible 2016
ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೀಕಾಯೆಹುವನ್ನು ಕರೆಯುವದಕ್ಕೆ ಹೋದ ದೂತನು ಅವನಿಗೆ - ಎಲ್ಲಾ ಪ್ರವಾದಿಗಳೂ ಏಕಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು ಎಂದು ಹೇಳಿದನು.
Kannada Bible (KNCL) BSI 2016
ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.