1 Kings 22:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೆ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
Kannada BSI Bible 2016
ಅರಸನು ಅವನಿಗೆ--ವಿಾಕಾಯೆ ಹುವೇ, ನಾವು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆಹೋಗಬಹುದೋ ಹೋಗಬಾ ರದೋ ಅಂದನು. ಇವನು ಪ್ರತ್ಯುತ್ತರವಾಗಿ--ಹೋಗಿ ಸಾಫಲ್ಯ ಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥನಾಗಿ ಬರುವಿ; ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು ಎಂದು ಹೇಳಿದನು.
Kannada Bible (KNCL) BSI 2016
ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.