1 Kings 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅಹಾಬನು, “ಯೆಹೋವನ ಶಕ್ತಿಯಿಂದ ನೀನು ಮಾತನಾಡುತ್ತಿಲ್ಲ. ನೀನು ನಿನ್ನ ಸ್ವಂತ ಮಾತುಗಳನ್ನು ಹೇಳುತ್ತಿರುವೆ. ನನಗೆ ನೀನು ನಿಜವನ್ನು ಹೇಳು! ನಾನು ನಿನಗೆ ಎಷ್ಟು ಸಲ ಹೇಳಬೇಕು? ಯೆಹೋವನು ತಿಳಿಸುವುದನ್ನೇ ನನಗೆ ಹೇಳು!” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
Kannada BSI Bible 2016
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನಿಗೆ - ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣಮಾಡಿಸಬೇಕು ಅನ್ನಲು ಅವನು -
Kannada Bible (KNCL) BSI 2016
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.