1 Kings 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕಾಯೆಹು, “ಮುಂದೆ ಸಂಭವಿಸುವುದು ನನಗೆ ಕಾಣುತ್ತಿದೆ. ಇಸ್ರೇಲಿನ ಸೈನ್ಯವು ಬೆಟ್ಟಗಳ ಮೇಲೆ ಚೆಲ್ಲಾಪಿಲ್ಲಿಯಾಗಿ ಕುರುಬನಿಲ್ಲದ ಕುರಿಗಳಂತಾಗಿದೆ. ಯೆಹೋವನು ಹೇಳುವುದು ಇದನ್ನೇ, ‘ಈ ಜನರಿಗೆ ನಾಯಕನಿಲ್ಲ. ಅವರು ಯುದ್ಧಮಾಡದೆ, ಮನೆಗೆ ಹೋಗಬೇಕು”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
Kannada BSI Bible 2016
ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರಕೊಟ್ಟನು.
Kannada Bible (KNCL) BSI 2016
ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.