1 Kings 22:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಹಾಬನು ಯೆಹೋಷಾಫಾಟನಿಗೆ, “ನೋಡಿದೆಯಾ! ನಾನು ನಿನಗೆ ಹೇಳಿದೆನಲ್ಲಾ! ಈ ಪ್ರವಾದಿಯು ಎಂದೂ ನನ್ನ ಬಗ್ಗೆ ಒಳ್ಳೆಯದೇನನ್ನೂ ಹೇಳುವುದಿಲ್ಲ. ನಾನು ಕೇಳಬಾರದ ಸಂಗತಿಗಳನ್ನು ಅವನು ಯಾವಾಗಲೂ ನನಗೆ ಹೇಳುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
Kannada BSI Bible 2016
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ ಎಂದನು.
Kannada Bible (KNCL) BSI 2016
ಆಗ ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.