1 Kings 22:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವರಿಗೆ, ‘ನಿಮ್ಮಲ್ಲಿ ಯಾರಾದರೂ ರಾಜನಾದ ಅಹಾಬನನ್ನು ಪ್ರೇರೇಪಿಸುವಿರಾ? ಅವನು ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ಹೋಗಬೇಕೆಂದು ನಾನು ಅಪೇಕ್ಷೆಪಟ್ಟಿದ್ದೇನೆ. ಅಲ್ಲಿ ಅವನು ಕೊಲ್ಲಲ್ಪಡುವನು’ ಎಂದು ಹೇಳಿದನು. ತಾವು ಏನು ಮಾಡಬೇಕೆಂಬುದರ ಬಗ್ಗೆ ದೂತರಲ್ಲಿ ಒಮ್ಮತದ ಅಭಿಪ್ರಾಯವುಂಟಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
Kannada BSI Bible 2016
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಹತ್ತಿರ ನಿಂತವರನ್ನು - ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರ ಕೊಟ್ಟರು.
Kannada Bible (KNCL) BSI 2016
ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.