1 Kings 22:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೀಕಾಯೆಹು ಹೀಗೆ ಹೇಳಿದ ಮೇಲೆ, “ಇಲ್ಲಿ ನಡೆದದ್ದೂ ಇದೇ. ನಿನ್ನ ಪ್ರವಾದಿಗಳೇ ನಿನಗೆ ಸುಳ್ಳುಹೇಳುವಂತೆ ಯೆಹೋವನು ಮಾಡಿದ್ದಾನೆ. ನಿನಗೆ ಮಹಾಕೇಡು ಬರಲೆಂದು ಯೆಹೋವನು ತಾನೇ ತೀರ್ಮಾನಿಸಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡುನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
Kannada Bible (KNCL) BSI 2016
ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.