1 Kings 22:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಅಹಾಬನು ಮೀಕಾಯೆಹುವನ್ನು ಬಂಧಿಸುವಂತೆ ತನ್ನ ಅಧಿಕಾರಿಯೊಬ್ಬನಿಗೆ ಆಜ್ಞೆ ಮಾಡಿದನು. ರಾಜನಾದ ಅಹಾಬನು, “ಅವನನ್ನು ಬಂಧಿಸಿ, ನಗರಾಧಿಕಾರಿಯಾದ ಆಮೋನ ಮತ್ತು ರಾಜಪುತ್ರನಾದ ಯೋವಾಷನ ಬಳಿಗೆ ತೆಗೆದುಕೊಂಡು ಹೋಗಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
Kannada BSI Bible 2016
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -
Kannada Bible (KNCL) BSI 2016
ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,