1 Kings 22:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲ್ಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
Kannada BSI Bible 2016
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ ಎಂದು ಹೇಳಿರಿ ಎಂಬದಾಗಿ ಆಜ್ಞಾಪಿಸಿದನು.
Kannada Bible (KNCL) BSI 2016
ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.