1 Kings 22:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.
Kannada Bible (KNCL) BSI 2016
ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.