1 Kings 22:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೋರಾಟದ ಸಂದರ್ಭದಲ್ಲಿ ರಾಜನಾದ ಯೆಹೋಷಾಫಾಟನನ್ನು ಈ ಅಧಿಪತಿಗಳು ನೋಡಿದರು. ಆ ಅಧಿಕಾರಿಗಳು ಅವನನ್ನು ಇಸ್ರೇಲಿನ ರಾಜನೆಂದು ತಿಳಿದು ಅವನನ್ನು ಕೊಲ್ಲುವುದಕ್ಕೆ ಅವರು ಹೋದರು. ಯೆಹೋಷಾಫಾಟನು ಕೂಗಿಕೊಳ್ಳಲಾರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
Kannada BSI Bible 2016
ಆದದರಿಂದ ರಥಾಧಿಪತಿಗಳು ಯೆಹೋ ಷಾಫಾಟನನ್ನು ನೋಡಿದಾಗ--ನಿಶ್ಚಯವಾಗಿ ಇವನು ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ತಿರುಗಿಕೊಂಡರು; ಆಗ ಯೆಹೋಷಾಫಾಟನು ಕೂಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡ ಬಂದರು.
Kannada Bible (KNCL) BSI 2016
ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡಲು ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.