1 Kings 22:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಒಂದು ಬಾಣವನ್ನು ಗಾಳಿಯಲ್ಲಿ ಹೊಡೆದನು. ಆದರೆ ಅವನ ಬಾಣವು ಇಸ್ರೇಲಿನ ರಾಜನಾದ ಅಹಾಬನಿಗೆ ಬಡಿಯಿತು. ಆ ಬಾಣವು ರಾಜನ ದೇಹದ ಕವಚದ ಸಣ್ಣ ಸಂಧಿಯಲ್ಲಿ ತಾಕಿತು. ರಾಜನಾದ ಅಹಾಬನು ತನ್ನ ರಥದ ಸಾರಥಿಗೆ, “ಒಂದು ಬಾಣವು ನನಗೆ ತಾಕಿತು! ರಥವನ್ನು ಈ ಪ್ರದೇಶದಿಂದ ಹೊರಗೆ ಓಡಿಸು. ನಾವು ಯುದ್ಧದಿಂದ ಹೊರಟುಹೋಗಬೇಕಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
Kannada BSI Bible 2016
ಆದರೆ ಒಬ್ಬ ಮನುಷ್ಯನು ಗುರಿಯಿಡದೆ ಬಿಲ್ಲಿಗೆ ಬಾಣವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದುಗಳಲ್ಲಿ ಹೊಡೆದನು; ಆದದರಿಂದ ಅವನು ತನ್ನ ರಥನಡಿಸುವವನಿಗೆ--ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇ ಕಡೆಗೆ ತಕ್ಕೊಂಡು ಹೋಗು. ಯಾಕಂದರೆ ನಾನು ಗಾಯಗೊಂಡಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.