1 Kings 22:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೈನಿಕರು ಹೋರಾಡುತ್ತಲೇ ಇದ್ದರು. ರಾಜನಾದ ಅಹಾಬನು ರಥದಲ್ಲಿಯೇ ಇದ್ದನು. ಅವನು ರಥದ ಒಂದು ಪಕ್ಕಕ್ಕೆ ಒರಗಿಕೊಂಡು ನಿಂತಿದ್ದನು. ಅವನು ಅರಾಮ್ಯರ ಸೇನೆಯ ಕಡೆಗೆ ನೋಡುತ್ತಲೇ ಇದ್ದನು. ಅವನ ದೇಹದಿಂದ ಹರಿದ ರಕ್ತವು, ರಥದ ತಳದಲ್ಲಿ ಮಡುಗಟ್ಟಿತು. ಸಾಯಂಕಾಲವಾದ ಮೇಲೆ ರಾಜನು ಸತ್ತುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
Kannada BSI Bible 2016
ಆ ದಿವಸ ಯುದ್ಧವು ಬಲವಾದದರಿಂದ ಅರಸನು ಅರಾಮ್ಯರಿಗೆದುರಾಗಿ ರಥದಲ್ಲಿಯೇ ಇದ್ದು ಸಾಯಂಕಾಲದಲ್ಲಿ ಸತ್ತುಹೋದನು; ಆದರೆ ಆ ಗಾಯದ ರಕ್ತವು ರಥದ ಮಧ್ಯದಲ್ಲಿ ಹರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆ ದಿವಸ ಯುದ್ಧವು ಬಹುಘೋರವಾಗಿದ್ದದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
Kannada Bible (KNCL) BSI 2016
ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಅರಸನು ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡು ನಿಲ್ಲಬೇಕಾಯಿತು. ಸಾಯಂಕಾಲವಾದಾಗ ಅವನು ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.