1 Kings 22:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಜನರು ಅಹಾಬನ ರಥವನ್ನು ಸಮಾರ್ಯದ ಕೊಳದ ನೀರಿನಲ್ಲಿ ತೊಳೆದರು. ರಥದಲ್ಲಿದ್ದ ರಾಜನಾದ ಅಹಾಬನ ರಕ್ತವನ್ನು ನಾಯಿಗಳು ನೆಕ್ಕಿದವು. ದೇವದಾಸಿಯರು ಆ ಕೊಳದ ನೀರನ್ನು ಸ್ನಾನಕ್ಕೆ ಉಪಯೋಗಿಸುತ್ತಿದ್ದರು. ಯೆಹೋವನು ಹೇಳಿದ್ದ ರೀತಿಯಲ್ಲಿಯೇ ಈ ಸಂಗತಿಗಳು ಸಂಭವಿಸಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
Kannada BSI Bible 2016
ಆ ರಥವು ಸಮಾರ್ಯದ ಕೆರೆಯಲ್ಲಿ ತೊಳೆಯಲ್ಪಡುವಾಗ ಕರ್ತನು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು; ಹಾಗೆಯೇ ಅವರು ಕವಚವನ್ನು ತೊಳೆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು; ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
Kannada Bible (KNCL) BSI 2016
ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು.