1 Kings 22:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅಹಾಬನು ತನ್ನ ಆಳ್ವಿಕೆಯ ಕಾಲದಲ್ಲಿ ಮಾಡಿದ ಸಂಗತಿಗಳನ್ನೆಲ್ಲಾ “ಇಸ್ರೇಲಿನ ರಾಜರುಗಳ ಇತಿಹಾಸ” ಪುಸ್ತಕದಲ್ಲಿ ಬರೆದಿದ್ದಾರೆ. ರಾಜನು ತನ್ನ ಅರಮನೆಯನ್ನು ಮತ್ತಷ್ಟು ಸುಂದರವಾಗಿ ಕಾಣುವಂತೆ ಮಾಡಲು ಬಳಸಿದ ದಂತದ ಕುರಿತಾಗಿಯೂ ಆ ಪುಸ್ತಕವು ತಿಳಿಸುತ್ತದೆ. ರಾಜನು ನಿರ್ಮಿಸಿದ ನಗರಗಳ ಬಗ್ಗೆಯೂ ಆ ಪುಸ್ತಕವು ತಿಳಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು ಇವುಗಳ ವಿವರವೂ ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.