1 Kings 22:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Kannada BSI Bible 2016
ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಉಳಿದ ಚರಿತ್ರೆಯೂ ಇವನು ಯುದ್ಧಗಳಲ್ಲಿ ನಡಿಸಿದ ಶೂರ ಕೃತ್ಯಗಳ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಇವನ ಉಳಿದ ಚರಿತ್ರೆ ಹಾಗು ಇವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.