1 Kings 22:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ರಾಜನಾದ ಅಹಜ್ಯನು ಯೆಹೋಷಾಫಾಟನಿಗೆ ಸಹಾಯಮಾಡಲು ಹೋದನು. ಅಹಜ್ಯನು ಆ ಹಡಗುಗಳಲ್ಲಿ ತನ್ನ ಸ್ವಂತ ನಾವಿಕರಲ್ಲಿ ಕೆಲವರನ್ನು ಯೆಹೋಷಾಫಾಟನ ಜನರೊಂದಿಗೆ ಕಳುಹಿಸುತ್ತೇನೆಂದು ಯೆಹೋಷಾಫಾಟನಿಗೆ ತಿಳಿಸಿದನು. ಆದರೆ ಯೆಹೋಷಾಫಾಟನು ಅಹಜ್ಯನ ಜನರನ್ನು ಸ್ವೀಕರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
Kannada BSI Bible 2016
ಆಗ ಅಹಾಬನ ಮಗನಾದ ಅಹಜ್ಯನು ಯೆಹೋ ಷಾಫಾಟನಿಗೆ--ನನ್ನ ಸೇವಕರು ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ ಅಂದನು; ಆದರೆ ಯೆಹೋ ಷಾಫಾಟನು ಸಮ್ಮತಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು - ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣಮಾಡುವದಕ್ಕೆ ಅಪ್ಪಣೆಯಾಗಲಿ ಎಂದು ಬೇಡಿಕೊಂಡನು; ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದದರಿಂದ ಓಫೀರನ್ನು ಮುಟ್ಟಲಿಲ್ಲ.
Kannada Bible (KNCL) BSI 2016
ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.