1 Kings 22:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನ ಸಲಹೆಯನ್ನು ನಾವು ಮೊದಲು ಕೇಳಬೇಕಾಗಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
Kannada BSI Bible 2016
ಆದರೆ ಯೆಹೂಷಾಫಾಟನು ಇಸ್ರಾಯೇಲಿನ ಅರಸ ನಿಗೆ--ನೀನು ದಯಮಾಡಿ ಇಂದು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.
Kannada Bible (KNCL) BSI 2016
ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.